ಹೊಸದಿಗಂತ ಡಿಜಿಟಲ್ ಡೆಸ್ಕ್:
2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾದ ಗಡುವನ್ನು ರಾಜ್ಯ ಸರ್ಕಾರ ಸೋಮವಾರ ಮತ್ತೊಮ್ಮೆ ವಿಸ್ತರಣೆ ಮಾಡಿದೆ.
ಬರೋಬ್ಬರಿ ನಾಲ್ಕು ಬಾರಿ ಗಡವು ವಿಸ್ತರಿಸಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಇಂದು ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದ್ದು, ಈ ತಿಂಗಳು ಕೊನೆಯವರೆಗೆ ಅಂದರೆ ನವೆಂಬರ್ 30ರವರೆಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ಆದೇಶ ಹೊರಡಿಸಿದೆ.
ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.