ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಗಾಗಿ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಆದೇಶಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಟೈಪಿಸ್ಟ್ , ಲ್ಯಾಬ್ ಟೆಕ್ನೀಶೀಯನ್, ಫಾರ್ಮಸಿಸ್ಟ್ ಮತ್ತು ಗ್ರೂಪ್ ಡಿ ವೃಂದದ ಎಲ್ಲಾ ಹುದ್ದೆಗಳನ್ನು ದಿನಾಂಕ 30:09:2021 ರವರೆಗೆ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಕ್ರಮ ಕೈಗೊಳ್ಳಲು ಸೂಚಿಸಿ ರಾಜ್ಯ ಸರ್ಕಾರದ ಅಪಾರ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದಾರೆ.
ಕೊರೋನಾ ಪ್ರಕರಣಗಳನ್ನು ನಿರ್ವಹಿಸಲು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು/ಸಿಬ್ಬಂದಿಗಳ ಸೇವಾ ಅವಧಿಯನ್ನು ಈ ಹಿಂದೆ ತಿಳಿಸಿರುವ ಷರತ್ತು ನಿಬಂಧನೆಗಳೊಂದಿಗೆ ದಿನಾಂಕ 1:04:2021 ರಿಂದ ದಿನಾಂಕ 30:09:2021 ರ ಅವಧಿಗೆ ಅನ್ವಯಿಸುವಂತೆ ವಿಸ್ತರಿಸಲು ಅನುಮತಿ ನೀಡಿ ಆದೇಶ ಹೊರಡಿಸಿರುತ್ತಾರೆ.