ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಸಾಮಾಜಿಕ ಹೋರಾಟಗಾರರು ಆಗಿರುವ ಕೆ.ಆರ್.ಸೌಮ್ಯ, ಅವರ ಪುತ್ರಿ ಪ್ರಬುದ್ಧಾ ಕೊಲೆಯಾಗಿದ್ದು, ಮಗಳ ಸಾವಿನ ಬಗ್ಗೆ ಸತ್ಯ ಹೊರಬರಬೇಕು ಎಂದು ಸಿಎಂಗೆ ಮನವಿ ಮಾಡಿದ್ದರು. ಸುಬ್ರಹ್ಮಣ್ಯಪುರ ಪೊಲೀಸರು ನನಗೆ ನ್ಯಾಯ ಕೊಡುವ ಬದಲು ಆರೋಪಿಗಳೊಂದಿಗೆ ಸೇರಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಿ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ಸಿಎಂ ಸಿಐಡಿ ತನಿಖೆ ವಹಿಸಿದ್ದಾರೆ.
ಮುಖ್ಯಮಂತ್ರಿಗಳು ಮನವಿ ಪುರಸ್ಕರಿಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಬುದ್ದ ಮರಣೋತ್ತರ ಪರೀಕ್ಷೆ ನಡೆದಾಗ ತಲೆಗೆ ಹೊಡೆದು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ಹಾಗೆ ದೇಹವನ್ನು ಇರಿಸಿದ್ದು ಕಂಡು ಬಂದಿತ್ತು. ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಬದಲಾಯಿಸಿದ್ದರು. ಆದರೂ ಸೂಕ್ತ ಸಾಕ್ಷ್ಯಗಳು ಸಿಕ್ಕಿರಲಿಲ್ಲ.