ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ 10 ಕೋಟಿ ಅನುದಾನ ಘೋಷಣೆ ಮಾಡಿದೆ.
ಸರ್ಕಾರ ಈಗಾಗಲೇ ಹಲವು ಕ್ಷೇತ್ರಗಳಿಗೆ ಅನುದಾನ ನೀಡಿದ್ದರೂ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ನೀಡಿರಲಿಲ್ಲ. ಈ ಸಮಸ್ಯೆ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿತ್ತು.
ಇದೀಗ ರಾಜ್ಯ ಸರಕಾರ 10 ಕೋಟಿ ಅನುದಾನ ನೀಡಿ ಬಿಬಿಎಂಪಿ ಆಯುಕ್ತರಿಗೆ ಆದೇಶ ಹೊರಡಿಸಿದೆ. ಈ ಮೂಲಕ ರಾಜಕೀಯ ಸಂಘರ್ಷಕ್ಕೆ ತೆರೆ ಬಿದ್ದಿದೆ.