ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಹೊರಟ ರಾಜ್ಯ ಸರಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಆರಂಭದಿಂದ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದ್ದು, ಗೃಹಲಕ್ಷ್ಮಿಯರಿಗೆ (Gruhalakshmi Scheme) ದುಡ್ಡು ತಲುಪದೇ ಸಾಕಷ್ಟು ಗೊಂದಲ ಉದ್ಭವವಾಗಿತ್ತು.

ರಾಜ್ಯದಲ್ಲಿ ಒಟ್ಟು 1.10 ಕೋಟಿ ಗೃಹಲಕ್ಷ್ಮಿಯರಿಗೆ ಹಣ ಜಮೆಯಾಗಿದ್ರೂ 5-6 ಲಕ್ಷದಷ್ಟು ಮಹಿಳೆಯರಿಗೆ ತಾಂತ್ರಿಕ ದೋಷದಿಂದ ಹಣ ಜಮೆಯಾಗಿರಲಿಲ್ಲ. ಇದೀಗ ಗೃಹಲಕ್ಷ್ಮಿಯರಿದ್ದಡೆಗೆ ಅಧಿಕಾರಿಗಳು ತೆರಳಿ ಅದಾಲತ್ ನಡೆಸಲಿದ್ದಾರೆ. ಇನ್ನೊಂದು ವಾರದಲ್ಲಿ ಪಂಚಾಯತಿ, ನಗರಸಭೆ, ಪುರಸಭೆ ಸೇರಿದಂತೆ ರಾಜ್ಯಾದ್ಯಂತ ಅದಾಲತ್ ನಡೆಯಲಿದ್ದು ಅಕೌಂಟ್‍ಗೆ ದುಡ್ಡು ಬಾರದ ಮಹಿಳೆಯರು ಇಲ್ಲಿ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ.

ಡಿಸೆಂಬರ್ 31 ರೊಳಗೆ ಎಲ್ಲಾ ಫಲಾನುಭವಿಗಳ ಅಕೌಂಟ್‍ಗೆ ಹಣ ಜಮೆ ಮಾಡಲು ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರೆ. ಇದರ ಮಧ್ಯೆ ಸುಮಾರು 50 ಸಾವಿರ ಟ್ಯಾಕ್ಸ್ ಪೇಯರ್ ಮಹಿಳೆಯರು ಕೂಡ ಗೃಹಲಕ್ಷ್ಮಿ ದುಡ್ಡಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇವರ ಅರ್ಜಿ ತಿರಸ್ಕಾರ ಮಾಡಿರೋದಾಗಿ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!