ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಮತ್ತೆ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದೆ.
ಈ ಹಿಂದೆ ತಿರಸ್ಕಾರವಾಗಿದ್ದ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್, ಇದೀಗ ಮತ್ತೆ ಪುನರ್ ಪರಿಶೀಲನೆ ಮಾಡುವಂತೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ. ಈ ಬಗ್ಗೆ ಸ್ವತಃ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ಕೆ ಪಾಟೀಲ್, ರಾಮಲಿಂಗಂ ಕಂಪನಿ ಅಕ್ರಮದ ಬಗ್ಗೆ ಟಿ.ಜೆ.ಅಬ್ರಾಹಂ ಅವರು 2020ರ ನ.19ರಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಸಿಬಿಗೆ ದೂರು ನೀಡಿದ್ದರು. PMLA ಕಾಯ್ದೆ ಅಡಿ ದೂರು ನೀಡಿ ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಆದ್ರೆ, ಅಂದು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ನಿರಾಕರಿಸಿದ್ದರು. ಇದೀಗ ಅದನ್ನು ಮತ್ತೆ ಪುನರ್ ಪರಿಶೀಲನೆಗೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ ಎಂದು ಸ್ಪಷ್ಟಪಡಿಸಿದರು.