ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ: ಆದೇಶ ಹಿಂಪಡೆದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

 

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೆ ಫೋಟೋ, ವಿಡಿಯೋ ತೆಗೆಯುವಂತಿಲ್ಲ ಎಂದು ಸರ್ಕಾರ ನಿನ್ನೆ ಆದೇಶಿಸಿತ್ತು. ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿಷೇಧಿಸಿದ 24ಗಂಟೆಯೊಳಗೆ ಆದೇಶವನ್ನು ಹಿಂಪಡೆದಿದೆ.  ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಿಷೇಧ ಆದೇಶವನ್ನು ಹೊರಡಿಸಿತ್ತು.

ನೌಕರರ ಸಂಘ ತಮ್ಮ ಮನವಿಯಲ್ಲಿ, ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಲ್ಲಿ ಕೆಲವರು ಕಚೇರಿಯ ಫೋಟೋ/ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಆ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸುವಂತೆ ಆದೇಶಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!