ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಾಗಿದ್ದು, ಈ ಪ್ರಕ್ರಿಯೆ ಆರಂಭಿಸಿದ್ದು ರಾಜ್ಯ ಸರ್ಕಾರ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಮೆಟ್ರೋ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯರ ಈ ಹೇಳಿಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪಿಸಿದ್ದಾರೆ.
2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್ ಬಿಲ್, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ ಎಂದರು.
ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಎಮ್‌ಆರ್‌ಸಿಎಲ್‌ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.