Wednesday, September 24, 2025

ಪ್ರಯಾಣಿಕರಿಗೆ ಮತ್ತೆ ಬಸ್ ದರ ಏರಿಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಂದೆಡೆ ಕೇಂದ್ರ ಸರ್ಕಾರ ಜಿಎಸ್‌ಟಿ ಸ್ಲ್ಯಾಬ್ ಗಳನ್ನು ಇಳಿಕೆ ಮಾಡುವ ಮೂಲಕ ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಿದ್ದರೆ, ರಾಜ್ಯ ಸರ್ಕಾರ ಮತ್ತೊಂದು ಸುತ್ತಿನ ಬೆಲೆ ಏರಿಕೆ ಶಾಕ್ ಕೊಡಲು ಸಿದ್ಧತೆ ನಡೆಸಿದೆ.

ದೇಸಿ ಹಾಲಿನ ಪ್ಯಾಕೆಟ್​ ದರ ಏರಿಕೆ ಆಗಿರುವುದರ ನಡುವೆ ಈಗ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಬಂದಿದೆ. ವಿದ್ಯುತ್ ದರ ಏರಿಕೆಯ ಮಾದರಿಯಲ್ಲೇ ಇನ್ನು ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಸಾರಿಗೆ ಸಂಸ್ಥೆಗಳ ದರ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ.

ಕೆಇಆರ್‌ಸಿ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ಮೋಟಾರು ವಾಹನ ನಿಯಮ 1989ರ ಅಡಿಯಲ್ಲಿ ದರ ನಿಯಂತ್ರಣ ಸಮಿತಿಯನ್ನ ರಾಜ್ಯ ಸರ್ಕಾರ ರಚನೆ ಮಾಡಿದೆ. ಈ ಸಮಿತಿ ಪ್ರತಿ ವರ್ಷ ರಸ್ತೆ ಸಾರಿಗೆ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಿದೆ.

ಇದನ್ನೂ ಓದಿ