Thursday, August 18, 2022

Latest Posts

ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಎಂ.ಬಿ. ಪಾಟೀಲ ಆರೋಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ವರದಿ, ವಿಜಯಪುರ:

ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲೆಯ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿಯೊಂದು ಕ್ಷೇತ್ರದಲ್ಲಿ ವಿಫಲವಾಗಿದೆ. ಅಲ್ಲದೇ, ರೈತಾಪಿ ವರ್ಗದವರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೇ ರೈತರು ಕಣ್ಣೀರು ಹಾಕುತ್ತಿದ್ದಾರೆ ಎಂದರು.

ಕೊರೋನಾ ಚಿಕಿತ್ಸೆಗೆ ರೆಮ್ಡಿಸಿವಿರ್ ಚುಚ್ಚುಮದ್ದು ಒದಗಿಸುವಲ್ಲಿ ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿಲ್ಲ. ಇದರಿಂದ ರೋಗಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ ಎಂದರು ದೂರಿದರು.

ನಮ್ಮ ಬಿಎಲ್ ಡಿಇ ಆಸ್ಪತ್ರೆಯಲ್ಲಿ ಬೆಡ್ ಹಾಗೂ ಚಿಕಿತ್ಸಾ ವೆಚ್ಚ ಕಡಿಮೆ ಮಾಡಿದರೂ ರೆಮ್ಡಿಸಿವರ್ ಔಷಧ ಸಿಗುತ್ತಿಲ್ಲ. ನಮಗ್ಯಾಕೆ ಬೇಕು ಹೇಳಿ ಇಷ್ಟೊಂದು ಕೆಲಸ ಮಾಡಲು ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!