ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೂರು ತಿಂಗಳಿಂದ ಮುರುಘಾ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವುದರಿಂದ ಚಿತ್ರದುರ್ಗದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ವಾಸ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮುರುಘಾ ಮಠದ ಶಿಕ್ಷಣ ಸಂಸ್ಥೆ, ಮಠದ ಚಿರ, ಸ್ಥಿರ ಆಸ್ತಿ ಲೆಕ್ಕಪತ್ರ ನಿರ್ವಹಣೆ ಜವಾಬ್ದಾರಿ ನೋಡಿಕೊಳ್ಳುವ ನಿಟ್ಟಿನಲ್ಲಿ ಆಡಳಿತಾಧಿಕಾರಿ ನೇಮಕ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!