ಹೊಸದಿಗಂತ ಡಿಜಿಟಲ್ ಡೆಸ್ಕ್:
ಈವರೆಗೂ 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ರಾಜ್ಯಾದ್ಯಂತ ದಾಖಲೆಯ 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ, ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.
ಕಳೆದ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ 14,41,049 ರೈತರಿಗೆ ಪರಿಹಾರ ನೀಡಿದ್ದೇ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಯಾವುದೇ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಎರಡರಷ್ಟು ರೈತರಿಗೆ ಬರ ಪರಿಹಾರ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಮಾಹಿತಿ ನೀಡಿದರು.
ಸಮೀಕ್ಷೆ ನಡೆಸಿ ಡಿಜಿಟಲ್ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರ ಹಣ ಜಮೆ ಮಾಡಲಾಗಿದೆ. ಶೇ.33ರಷ್ಟು ಬೆಳೆ ನಷ್ಟ ಅನುಭವಿಸಿದ ಎಲ್ಲಾ ರೈತರಿಗೂ ಪರಿಹಾರ ನೀಡಲಾಗಿದೆ. ನೀರಾವರಿ ಆಶ್ರಿತ ಜಮೀನಿದ್ರೆ ಯಾರಿಗೆಲ್ಲ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗಿಲ್ಲ ಅಂತವರಿಗೂ ಪರಿಹಾರ ನೀಡಿದ್ದೇವೆ. ಬಹುವಾರ್ಷಿಕ ತೋಟಗಾರಿಕಾ ಬೆಳೆಗಳಿಗೂ ಪರಿಹಾರ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.