ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಕೇಸ್‌ನಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ನಾಯಕ, ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ.
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ ಮಾಡಿರುವ ಎಲ್ಲರೂ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದರು. ಸುಪ್ರೀಂಕೋರ್ಟ್ ಅವರ ಅರ್ಜಿ ವಜಾ ಮಾಡಿತ್ತು. ಕೋರ್ಟ್‌ಗೆ ಅರ್ಜಿ ಹಾಕಿರೋರಿಗೆ ಸುಪ್ರೀಂಕೋರ್ಟ್ ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಬುರುಡೆ ಗ್ಯಾಂಗ್ ಅರ್ಜಿ ವಜಾ ಮಾಡಿದ್ರೂ ರಾಜ್ಯ ಸರ್ಕಾರ ಇಲ್ಲಿ ಎಸ್‌ಐಟಿ ರಚನೆ ಮಾಡಿತ್ತು. ಸುಪ್ರೀಂಕೋರ್ಟ್ ತೀರ್ಪಿಗೆ ಸರ್ಕಾರ ಹೀಗೆ ಮಾಡೋದಾ ಎಂದು ಪ್ರಶ್ನಿಸಿದರು.
ಎಸ್‌ಐಟಿ ತನಿಖೆ ಮಾಡಿದರೂ ಏನೂ ಸಿಕ್ಕಿಲ್ಲ. ಸುಪ್ರೀಂಕೋರ್ಟ್ ಆದೇಶವೇ ಗೊತ್ತಿಲ್ಲ ಅಂತ ಜಾಣ ನಡೆ ಸರ್ಕಾರ ತೋರಿಸಿದೆ. ಸರ್ಕಾರ ಜನರ ಮುಂದೆ ಬೆತ್ತಲೆ ಆಗಿದೆ. ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ಕೊಡಬೇಕು. ಸುಪ್ರೀಂಕೋರ್ಟ್ ತೀರ್ಪು ಇದ್ದರೂ ಹೇಗೆ ತನಿಖೆ ಮಾಡಿದ್ರಿ ಅಂತ ಸರ್ಕಾರ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.