March 15, 2026
Sunday, March 15, 2026
spot_img

ಪ್ರತೀ ವರ್ಷ ಮೆಟ್ರೋ ದರ ಹೆಚ್ಚು ಮಾಡ್ಬೇಕು ಅಂತ ಸಲಹೆ ಕೊಟ್ಟಿದ್ದೇ ರಾಜ್ಯ ಸರ್ಕಾರ: ತೇಜಸ್ವಿ ಸೂರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವು ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಫೇರ್ ಫಿಕ್ಸೇಷನ್ ಸಮಿತಿಯ ಮುಂದೆ ಮೆಟ್ರೋ ದರಗಳನ್ನು ವಾರ್ಷಿಕವಾಗಿ ಪರಿಷ್ಕರಿಸುವ ತಕ್ಷಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದರು ಎಂದು ಅವರು ದಾಖಲೆಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಇದು ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಿತ್ತು ಎಂದು ಅವರು ತಿಳಿಸಿದ್ದಾರೆ. ದೆಹಲಿ, ಕೋಲ್ಕತ್ತಾ, ಕೊಚ್ಚಿನ್, ಹೈದರಾಬಾದ್‌ನಂತಹ ನಗರಗಳಲ್ಲಿ ವಾರ್ಷಿಕ ದರ ಪರಿಷ್ಕರಣೆ ನಿಯಮ ಇಲ್ಲದಿದ್ದರೂ, ಕರ್ನಾಟಕದ ಅಧಿಕಾರಿಗಳು ಪ್ರತಿ ವರ್ಷ ದರ ಏರಿಕೆಗೆ ಶಿಫಾರಸು ಮಾಡಿದ್ದರು. ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ಬಿಎಂಆರ್‌ಸಿಎಲ್‌ಗೆ ಈ ಕುರಿತು ಹಲವು ಬಾರಿ ಪತ್ರ ಬರೆದು ಫೇರ್ ಫಿಕ್ಸೇಷನ್ ಸಮಿತಿಯನ್ನು ಶೀಘ್ರವಾಗಿ ರಚಿಸುವಂತೆ ಒತ್ತಾಯಿಸಿದೆ ಎಂದು ಅವರು ಮಾಹಿತಿ ನೀಡಿದರು.


Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !