Sunday, August 14, 2022

Latest Posts

ಲಾಕ್ ಡೌನ್ ವೇಳೆ ಈ ಕೈಗಾರಿಕೆಗಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾರ ಸೋಮವಾರದಿಂದ 14 ದಿನ ಲಾಕ್ ಡೌನ್ ಜಾರಿಗೊಳಿಸಿದೆ. ಈ ಸಂದರ್ಭದಲ್ಲಿ ಸರ್ಕಾರ ಕೆಲವು ಕೈಗಾರಿಕೆಗಳನ್ನು ತೆರೆಯಲು ಅನುಮತಿ ನೀಡಿದೆ.
ಯಾವ ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ ಎಂಬುದರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.

1) ವೈದ್ಯಕೀಯ ಪರಿಕರಗಳನ್ನು ತಯಾರಿಸುವ ಕಾರ್ಖಾನೆಗಳು

2) ಔಷಧ ಮತ್ತು ಆಕ್ಸಿಜನ್ ಉತ್ಪಾದನಾ ಕಾರ್ಖಾನೆಗಳು

3) ಔಷಧ ಕಚ್ಚಾ ಸಾಮಗ್ರಿ ಉತ್ಪಾದಿಸುವ ಕಾರ್ಖಾನೆಗಳು

4) ಆಹಾರ ಉತ್ಪಾದನಾ ಕೈಗಾರಿಕೆ ಹಾಗೂ ಅವಶ್ಯ ಕೈಗಾರಿಕೆಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

5) ಸರ್ಕಾರಿ, ಖಾಸಗಿ ಕೈಗಾರಿಕೆಗಳಿಗೆ ಸರ್ಕಾರದಿಂದ ಅನುಮತಿ ನೀಡಿದ್ದು, ಈ ಅವಧಿಯಲ್ಲಿ ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕೈಗಾರಿಕೆ ತೆರೆಯಹುದು. ಆದರೆ ಕೆಲಸದ ಚಟುವಟಿಕೆ ಸಂದರ್ಭದಲ್ಲಿ ನೌಕರರು ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಸೇರಿದಂತೆ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss