Saturday, July 2, 2022

Latest Posts

ಕೋವಿಡ್‌ ಸ್ಥಿತಿಗೆ ರಾಜ್ಯವು ತಲೆಕೆಡಿಸಿಕೊಂಡಿದೆ, ಸಂಜೆ ಸಿಎಂ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಹೆಚ್ಚುತ್ತಿರುವ ಕೋವಿಡ್ ಸೋಂಕನ್ನು ಮುಂಚಿತವಾಗಿಯೇ ನಿಯಂತ್ರಿಸುವ ಸಲುವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಇಂದು ಸಂಜೆ 4ಗಂಟೆಗೆ ಮುಖ್ಯಮಂತ್ರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರ ಮಹತ್ವದ ಸಭೆಯನ್ನು ಕರೆದಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಧಾರವಾಡ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಶಾಲೆ ಮತ್ತು ಹಾಸ್ಟೆಲ್‌ಗಳಲ್ಲಿ ಕೋವಿಡ್ ಸೋಂಕು ಉಲ್ಬಣವಾಗುತ್ತಿರುವುದನ್ನು ಗಮನಿಸಲಾಗಿದೆ. ಕೇರಳ ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಅತಿ ಶೀಘ್ರದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಸಂಜೆ 4ಗಂಟೆಗೆ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಇಲಾಖೆ, ವಿಪತ್ತು ನಿರ್ವಹಣಾ ಸಮಿತಿ ಮತ್ತು ತ್ಞಜ ಸಲಹೆಗಾರರು ಭಾಗವಹಿಸಲಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ. ಹೊಸ ರೂಪಾಂತರ ತಳಿ ಬಂದಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಕೇರಳದಿಂದ ಬಂದಿದೆ ಎನ್ನುತ್ತಿದ್ದಾರೆ. ಹೀಗೆ ಎಲ್ಲ ವಿಚಾರಗಳನ್ನು ಸಭೆಯಲ್ಲಿ ವಿಮರ್ಶಿಸಿ, ಮುಂಜಾಗ್ರತಾ ಕ್ರಮಗಳ ಕುರಿತು ತೀರ್ಮಾನಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಕೇವಲ ಆರೋಗ್ಯ ಇಲಾಖೆ ಏನು ಕ್ರಮ ತೆಗೆದುಕೊಳ್ಳುತ್ತದೆ ಎಂಬುದು ಮಾತ್ರ ಮುಖ್ಯವಲ್ಲ. ಸಾರ್ವಜನಿಕರು ಏನು ಕ್ರಮ ತೆಗೆದುಕೊಳ್ಳಬೇಕೆನ್ನುವುದು ಕೂಡ ಮಹತ್ವದ್ದಾಗುತ್ತದೆ. ತಡಮಾಡದೇ ಅಂತಹ ತುರ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಈ ಸಭೆ ನಡೆಸಲಾಗುತ್ತಿದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ, ಸುದೀರ್ಘ ಸಭೆಯ ನಂತರ ಏನೆಲ್ಲ ಮಾನದಂಡಗಳನ್ನು ಅನುಸರಿಸಬೇಕೆಂದು ಸಾರ್ವಜನಿಕರಿಗೆ ತಿಳಿಸಲಾಗುತ್ತದೆ ಎಂದು ಹೇಳಿದರು.

ಇಂದು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಕೋವಿಡ್‌ ಸ್ಥಿತಿಗತಿ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಒಮಿಕ್ರಾನ್ ರೂಪಾಂತರಿಯ ಆತಂಕದ ನಡುವೆ ಪ್ರಧಾನಿ ಮೋದಿಯಿಂದ ಲಸಿಕೆ ವಿತರಣೆ ಪರಾಮರ್ಶೆ ಸಭೆ

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss