ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿರುವುದು ದಬ್ಬಾಳಿಕೆ ನಡೆಸುವ ಜನವಿರೋಧಿ ಹಿಟ್ಲರ್ ಸರ್ಕಾರ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಅವರು ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ, ದೌರ್ಜನ್ಯ ನಡೆಸಲಾಗುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುವ ಕಾಂಗ್ರೆಸ್ ಪುಡಾರಿಗಳಿಗೆ ಬಡ್ಡಿ ಸಮೇತ ಉತ್ತರ ಕೊಡಲಾಗುವುದು ಎಂದರು.
ಕರ್ನಾಟಕದಲ್ಲಿ ಲವ್ ಜಿಹಾದ್‌ಗೆ ಹಿಂದೂ ಯುವತಿಯರು ಬಲಿಯಾಗುತ್ತಿದ್ದಾರೆ. ಆದ್ದರಿಂದ ಹಿಂದೂ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ನೀಡಬೇಕಾಗಿದೆ. ಅಹಿಂದ ಹೆಸರು ಹೇಳಿಕೊಂಡು ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಹಿಂದುಳಿದ ಸಮುದಾಯಗಳನ್ನು ಕಡೆಗಣಿಸಿ, ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.