ರಾಜ್ಯಕ್ಕೆ ಬೇಕು ಅಧಿಕೃತ ಧ್ವಜ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ, ಒಪ್ಪಿಗೆ ಸಿಗಲಿ ಎಂದ ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ರಾಜ್ಯೋತ್ಸವ (Kannada Rajyotsava) ಬೆನ್ನಲ್ಲೆ ಕನ್ನಡಕ್ಕೊಂದು ನಾಡಗೀತೆಯಂತೆ ನಾಡಧ್ವಜ ಇರಬೇಕೆಂಬುದು ಆರೂವರೆ ಕೋಟಿ ಕನ್ನಡಿಗರ ಒಕ್ಕೊರಲ ಒತ್ತಾಯ. ಕನ್ನಡಿಗರ ಎದೆಯ ದನಿಗೆ ಓಗೊಟ್ಟು ನಾಡ ದ್ವಜವೊಂದನ್ನು ವಿನ್ಯಾಸಗೊಳಿಸಿ, ಮನ್ನಣೆಗಾಗಿ ಐದು ವರ್ಷಗಳ ಹಿಂದೆಯೇ ನಾವು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದೆವು. ಆದರೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅನ್ಯಾಯ ಎಸಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದರು.

ಇದೀಗಈ ಬಗ್ಗೆ ಗೃಹಸಚಿವ ಪರಮೇಶ್ವರ್ (Dr G Parameshwar) ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯಕ್ಕೆ ಅಧಿಕೃತ ರಾಜ್ಯ ಧ್ವಜ ಬೇಕು. ‘ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ, ಒಪ್ಪಿಗೆ ಕೊಡಬೇಕು ಎಂದರು.

ನಿನ್ನೆ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ರಾಜ್ಯಕ್ಕೆ ಅಧಿಕೃತ ರಾಜ್ಯ ಬಾವುಟ ಬೇಕು. ಬಾವುಟಕ್ಕೆ ಅನುಮತಿ ಸಿಕ್ಕರೆ ಬಾವುಟಕ್ಕೂ ಗೌರವ ಸಿಗಲಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಅದಕ್ಕೆ ಕೇಂದ್ರ ಒಪ್ಪಿಗೆ ಕೊಡಬೇಕು. ಕೇಂದ್ರದ ಮೇಲೆ ಒತ್ತಡ ಹಾಕ್ತೀವಿ. ಒತ್ತಡ ಅಂದರೆ ತಲೆ ಮೇಲೆ ಕಲ್ಲು ಇಡೋಕೆ ಆಗೊಲ್ಲ. ಇನ್ನೊಂದು ಪತ್ರ ಬರೆದು ಆಗ್ರಹ ಮಾಡಬಹುದು ಅಷ್ಟೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!