ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಆಪರೇಷನ್ ಸಿಂಧೂರ ಬಳಿಕ ಪಾಕಿಸ್ತಾನಕ್ಕೆ 19 ಸಾವಿರ ಕೋಟಿ ಸಾಲ ಮಂಜೂರು ಮಾಡಿದ್ದ IMF ಇದೀಗ ತನ್ನ ವರಸೆ ಬದಲಿಸಿದೆ.
ಹೌದು, ಸಾಲದ ಹಣ ಬಿಡುಗಡೆ ಮಾಡುವುದಕ್ಕೆ ಮೊದಲೇ 11 ಹೊಸ ಷರತ್ತುಗಳನ್ನು ಪಾಕಿಸ್ತಾನಕ್ಕೆ ವಿಧಿಸಿದೆ. ತನ್ನ ವಿಸ್ತೃತ ನಿಧಿ ಸೌಲಭ್ಯ ಅಡಿಯಲ್ಲಿ ಸಾಲ ಮಂಜೂರು ಮಾಡಿದ್ದ ಐಎಂಎಫ್ 11 ಹೊಸ ಷರತ್ತುಗಳನ್ನು ವಿಧಿಸಿದೆ. ಇದರಿಂದ ಪಾಕ್ ಮೇಲೆ ಈವರೆಗೆ ವಿಧಿಸಿರುವ ಒಟ್ಟು ಷರತ್ತುಗಳು 50ಕ್ಕೆ ಏರಿಕೆಯಾಗಿದೆ. ಈ ಷರತ್ತುಗಳನ್ನು ಪಾಲಿಸದಿದ್ದರೆ ಮುಂದಿನ ಕಂತಿನ ಹಣ ಬಿಡುಗಡೆ ಮಾಡುವುದಿಲ್ಲ ಎಂದು ಖಡಕ್ ಸೂಚನೆ ನೀಡಿದೆ.
ಜೊತೆಗೆ ಭಾರತ-ಪಾಕಿಸ್ತಾನದ ಉದ್ವಿಗ್ನತೆ ಮುಂದುವರಿದರೆ ಅದರ ಪರಿಣಾಮವು ಹಣಕಾಸು ವ್ಯವಸ್ಥೆ, ದೇಶದ ಆಂತರಿಕ ಮತ್ತು ಬಾಹ್ಯ ಸುಧಾರಣೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಕೆ ನೀಡಿದೆ.