ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯಲ್ಲಿ ತಾಪಮಾನ ಹಚ್ಚಳವಾಗಿದ್ದು, ಏಪ್ರಿಲ್ ವೇಳೆಗೆ 411 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಗಳು ಎದುರಾಗಲಿದೆ ಎಂದು ಹೇಳಲಾಗಿದೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಈಗಾಗಲೇ 20 ಗ್ರಾಮಗಳಲ್ಲಿ ಅಂತರ್ಜಲ ಬತ್ತಿ ಹೋಗಿದೆ. ಏಪ್ರಿಲ್ ವೇಳೆಗೆ 411 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗುವ ಸಾಧ್ಯತೆಗಳಿದ್ದು, ಮಳೆಗಾಲ ಪ್ರಾರಂಭವಾಗುವವರೆಗೂ ಜನರು ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ತೋಡೂರಿನ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಗ್ರಾಮಸ್ಥರು ಸಚಿರವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.
ನಮಗೆ ಎರಡು ವಾರಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತದೆ, ನೀರಿಗಾಗಿ ಹಲವರು ಖಾಲಿ ಮಡಕೆಗಳೊಂದಿಗೆ ಹಲವಾರು ಮೈಲುಗಳಷ್ಟು ನಡೆದುಕೊಂಡು ಹೋಗುತ್ತಿದ್ದಾರೆ. ಪ್ರತಿ ಎರಡು ವಾರಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತದೆ. ನಮ್ಮ ಹತ್ತಿರದ ಬಾವಿಗಳು ಮತ್ತು ಬೋರ್‌ವೆಲ್‌ಗಳ ನೀರು ಬತ್ತಿಹೋಗಿದೆ ಎಂದು ತೋಡೂರಿನ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.