ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಬಿಸಿಲಿನ ತೀವ್ರತೆ ಹೆಚ್ಚುತ್ತಲೇ ಸಾಗಿದ್ದು, ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜೊತೆಗೆ ನಾಗರಿಕರು ವ್ಯಾಪಕ ಮುನ್ನೆಚ್ಚರಿಕೆ ವಹಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವೂ ಎಚ್ಚರಿಕೆ ನೀಡಿದೆ.
ಕೊಲ್ಲಂ, ಅಲಪ್ಪುಳ, ಕೋಯಿಕ್ಕೋಡ್, ಕಣ್ಣೂರು, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ನಾಲ್ಕು ಡಿಗ್ರಿ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಲಾಖೆ ಭವಿಷ್ಯ ನುಡಿದಿದೆ.
ಸದ್ಯ ಪಾಲಕ್ಕಾಡ್‌ನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಆಗಿದೆ. ಕೊಲ್ಲಂ, ಆಲಪ್ಪುಳ, ಕೋಯಿಕ್ಕೋಡ್ ಮತ್ತು ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇದೆ. ಕೊಟ್ಟಾಯಂ, ಎರ್ನಾಕುಳಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ತಾಪಮಾನ ೩೬ ರಷ್ಟಿದೆ