ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ  ವೈಯಾಲಿಕಾವಲ್​​ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಏಕೆಂದರೆ, ಬೆಂಗಳೂರಿಗೆ ಬರುತ್ತಿದ್ದ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು, ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ, ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಕ್ಟೋಬರ್​​​ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡು ಸರಬರಾಜು ಮಾಡುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!