ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರಸಂಹಿತೆ ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರಿಂಕೋರ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸಾಮಾನ್ಯ ಡ್ರೆಸ್ ಕೋಡ್ (ಏಕರೂಪದ ವಸ್ತ್ರ ಸಂಹಿತೆ) ಜಾರಿಗೊಳಿಸಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು , ಇದು ತೀರ್ಪಿಗಾಗಿ ನ್ಯಾಯಾಲಯಕ್ಕೆ ಬರಬೇಕಾದ ವಿಷಯವಲ್ಲ ಎಂದು ಹೇಳಿದೆ.

ಸಮಾನತೆ, ಭ್ರಾತೃತ್ವ ಮತ್ತು ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸಲು ಡ್ರೆಸ್ ಕೋಡ್ ಜಾರಿಗೊಳಿಸಬೇಕು ಎಂದು ಪಿಐಎಲ್​ನಲ್ಲಿ ವಾದಿಸಲಾಗಿದೆ. ಅರ್ಜಿದಾರ ನಿಖಿಲ್ ಉಪಾಧ್ಯಾಯ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಇದೊಂದು ಸಾಂವಿಧಾನಿಕ ಸಮಸ್ಯೆಯಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ನಿರ್ದೇಶನ ನೀಡುವಂತೆ ಕೋರಿದ್ದರು.ಆದರೆ ಪಿಐಎಲ್​ ಅನ್ನು ವಿಚಾರಣೆಗೆ ಸ್ವೀಕರಿಸಲು ನ್ಯಾಯಪೀಠ ಒಪ್ಪದ ಕಾರಣ ಆರ್ಜಿದಾರರು ಅರ್ಜಿಯನ್ನು ಹಿಂಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!