ಜಹಾಂಗಿರ್​ಪುರಿಯಲ್ಲಿ ನಡೆಯುತ್ತಿದ್ದ ಒತ್ತುವರಿ ಕಾರ್ಯಾಚರಣೆಗೆ ತಡೆ ನೀಡಿದ ಸುಪ್ರೀಂಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ಜಹಾಂಗೀರ್​ಪುರಿಯಲ್ಲಿ ಮುನ್ಸಿಪಲ್ ಕಾರ್ಪೊರೇಷನ್​​ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡಿದ್ದು, ತೆರವು ಕಾರ್ಯಾಚರಣೆ ನಿಲ್ಲಿಸಿ, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ.
ದೆಹಲಿಯ ಜಹಾಂಗೀರ್​ ಪುರಿ ಕಳೆದ ಕೆಲ ದಿನಗಳ ಹಿಂದೆ ಹನುಮ ಜಯಂತಿ ವೇಳೆ ಎರಡು ಸಮುದಾಯಗಳ ಮಧ್ಯೆ ಕಲ್ಲು ತೂರಾಟ ನಡೆದು ಹಿಂಸಾಚಾರಕ್ಕೆ ಕಾರಣವಾಗಿತ್ತು.
ಜಹಾಂಗೀರ್​ಪುರಿ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಕ್ರಮ ಕಟ್ಟಡ ತೆಗೆದು ಹಾಕಲು ಇಂದು ಬೆಳಗ್ಗೆ ಎನ್​​ಡಿಎಂಸಿ ಕಾರ್ಯಾಚರಣೆ ಕೈಗೊಂಡಿತ್ತು. ಸ್ಥಳಕ್ಕೆ 9 ಬುಲ್ಡೋಜರ್ಸ್​ ರವಾನಿಸಿ, ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸುಮಾರು 400 ಸಿಬ್ಬಂದಿ ಸಹ ನಿಯೋಜನೆ ಮಾಡಲಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನಲ್ಲಿ ದಾವೆ ದಾಖಲಾಗುತ್ತಿದ್ದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ತೆರವು ಕಾರ್ಯಾಚರಣೆ ನಿಲ್ಲಿಸಿ ಯಥಾಸ್ಥಿತಿಗೆ ಆದೇಶ ಹೊರ ಹಾಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!