INDIA ಹೆಸರಿಗೆ ನಿರ್ಬಂಧ ಹೇರಲು ಸುಪ್ರೀಂ ಕೋರ್ಟ್‌ ನಿರಾಕರಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಸರಕಾರದ ವಿರುದ್ಧ ಅಖಾಡಕ್ಕೆ ಇಳಿಯಲು ಸಜ್ಜಾದ ವಿರೋಧ ಪಕ್ಷಗಳ ಒಕ್ಕೂಟಕ್ಕೆ ಐಎನ್‌ಡಿಐಎ (INDIA) ಎಂದು ನಾಮಕರಣ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ.

ಇಂದು ನ್ಯಾ. ಎಸ್‌ಕೆ ಕೌಲ್ ನೇತೃತ್ವದ ಪೀಠದಲ್ಲಿ 26 ರಾಜಕೀಯ ಪಕ್ಷಗಳ ಮೈತ್ರಿಗೆ ನೀಡಿರುವ INDIA ಹೆಸರನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಯಿತು.

ಈ ವೇಳೆ ಯಾರು ನೀವು? ಆಸಕ್ತಿ ಏನು? ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಚುನಾವಣಾ ಆಯೋಗಕ್ಕೆ (Election commission) ಹೋಗಿ. ನಿಮಗೆ ಸಂಪೂರ್ಣ ಪ್ರಚಾರ ಬೇಕು ಎಂದು ಅಭಿಪ್ರಾಯಪಟ್ಟು ಚಾಟಿ ಬೀಸಿತು.

ಹೆಸರನ್ನು ಬಳಸುವುದು ನೈತಿಕತೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ವಾದಕ್ಕೆ ನ್ಯಾ. ಕೌಲ್, ನಾವು ರಾಜಕೀಯದಲ್ಲಿ ನೈತಿಕತೆಯನ್ನು ನಿರ್ಧರಿಸಲು ಹೋಗುವುದಿಲ್ಲ ಎಂದು ಉತ್ತರಿಸಿ ಭಾರತೀಯ ಚುನಾವಣಾ ಆಯೋಗದ ಮುಂದೆ ಅರ್ಜಿಗಳನ್ನು ಸಲ್ಲಿಸಿ ಎಂದು ಸೂಚಿಸಿತು. ಸುಪ್ರೀಂ ಸೂಚನೆಯ ಬೆನ್ನಲ್ಲೇ ಅರ್ಜಿದಾರರು ಅರ್ಜಿಯನ್ನು ಹಿಂದಕ್ಕೆ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!