ಒಳಮೀಸಲಾತಿ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಈ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತನ್ನ ಹಿಂದಿನ ತೀರ್ಪಿನಲ್ಲಿ ಯಾವುದೇ ದೋಷವಿಲ್ಲ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಏಳು ನ್ಯಾಯಾಧೀಶರ ಸಂವಿಧಾನ ಪೀಠ, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.

ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾದ ಅರ್ಜಿಗಳು ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಳೆದ ಆಗಸ್ಟ್ 1 ರಂದು ಒಳಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರಗಳು ಎಸ್ ಸಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಬಹುದು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯೊಳಗೆ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿತ್ತು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!