ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಥುರಾ ಶ್ರೀಕೃಷ್ಣ ದೇವಸ್ಥಾನದ ಸುತ್ತ ಮುತ್ತಲಿನ ಭಾರತೀಯ ರೈಲ್ವೇ ಇಲಾಖೆ ಪ್ರದೇಶದಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಡೆಯುತ್ತಿತ್ತು. ಆದರೆ ಇದೀಗ 10 ದಿನಗಳ ತೆರವು ಕಾರ್ಯ ಸ್ಥಗಿತಗೊಳಿಸಿ ಯಥಾ ಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಭಾರತೀಯ ರೈಲ್ವೇ ಇಲಾಖೆ ಅಕ್ರಮ ಕಟ್ಟಡಗಳ ತೆರವು ಕಾರ್ಯ ಆರಂಭಿಸಿತ್ತು. ಆದರೆ ಇದರ ವಿರುದ್ಧ ಅಲ್ಲಿನ ನಿವಾಸಿ ಯಾಕೂಬ್ ಶಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ಅನಿರುದ್ಧ್ ಬೋಸ್, ಸಂಜಯ್ ಕುಮಾರ್ ಹಾಗೂ ಎಸ್‌ವಿಎನ್ ಭಟ್ಟಿ ತ್ರಿಸದಸ್ಯ ಪೀಠ , ಧ್ವಂಸ ಕಾರ್ಯಕ್ಕೆ ತಡೆ ನೀಡಿದೆ. ಇದೇ ವೇಳೆ ಭಾರತೀಯ ರೈಲ್ವೇ ಇಲಾಖೆಗೆ ನೋಟಿಸ್ ನೀಡಿದೆ. 10 ದಿನಗಳ ಕಾಲ ಯಥಾ ಸ್ಥಿತಿ ಕಾಪಾಡಬೇಕು. ಮುಂದಿನ ವಾರ ಇದೇ ಪ್ರಕರಣ ವಿಚಾರಣೆ ನಡೆಸುವುದಾಗಿ ಹೇಳಿದೆ.
ರೈಲ್ವೇ ಇಲಾಖೆ ತನ್ನ ಅಧೀನದಲ್ಲಿರುವ ಪ್ರದೇಶಗಳನ್ನು ಅಕ್ರಮವಾಗಿ ಬಳಸಿಕೊಂಡವರಿಗೆ ನೋಟಿಸ್ ನೀಡಿ ತೆರವುಗೊಳಿಸುವ ಕಾರ್ಯ ನಡೆಸುತ್ತಿದೆ. ಆದರೇ ಶೇಕಡಾ 95 ರಷ್ಟು ಕಡೆ ಇದೇ ರೀತಿಯ ವಿರೋಧ, ತಡೆಗಳು ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶದಿಂದ ರೈಲ್ವೇ ಇಲಾಖೆ ತೆರವು ಕಾರ್ಯ ಸ್ಥಗಿತಗೊಳಿಸಿದೆ.