ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.
ಕೇಂದ್ರ ಸರ್ಕಾರಕ್ಕೆ ಸಂವಿಧಾನ ವಿಧಿ 370 ರದ್ದತಿಯಲ್ಲಿ ಜಯ ಸಿಕ್ಕಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಕ್ಕಿದ್ದು, 2024ರ ಸೆಪ್ಟೆಂಬರ್ 30ರೊಳಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಆದೇಶಿಸಿದೆ.
ದೇಶದ ಎಲ್ಲಾ ರಾಜ್ಯಗಳು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿವೆ. ಸಂವಿಧಾನ ವಿಧಿ 371 ರಿಂದಜೆವರೆಗೆ ವಿವಿಧ ರಾಜ್ಯಗಳ ವಿಶೇಷ ವ್ಯವಸ್ಥೆಗಳ ಉದಾಹರಣಗಳಾಗಿವೆ, ಹೀಗಾಗಿ ಜಮ್ಮು ಮತ್ತು ಕಾಶ್ಮೀರವು ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ. ಹೀಗಾಗಿ ಭಾರತದ ಎಲ್ಲಾ ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳು ಎಂದು ಕೋರ್ಟ್ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ತೀರ್ಪನ್ನು ಪ್ರಕಟಿಸಿದೆ. ಈ ಪೀಠದಲ್ಲಿ ಸಿಜೆಐ ಹೊರತಾಗಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಇದ್ದಾರೆ. ಸೆಪ್ಟೆಂಟರ್ ತಿಂಗಳಿನಲ್ಲಿ ಸತತ 16 ದಿನಗಳ ಕಾಲ ಸರ್ವಪಕ್ಷಗಳ ವಾದ ಆಲಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.
2019 ರಲ್ಲಿ ಕೇಂದ್ರ ಸರ್ಕಾರ 370 ನೇ ವಿಧಿಯನ್ನು ರದ್ದು ಮಾಡುವ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು.ಸರ್ಕಾರದ ಈ ನಿರ್ಧಾರದ ವಿರುದ್ಧ ಕೋರ್ಟ್‌ನಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಹಲವು ಸುತ್ತಿನ ವಾದ ವಿವಾದದ ನಂತರ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
VIDEO | Five-judge Supreme Court bench assembles to pronounce verdict on pleas challenging abrogation of provisions of Article 370 of Constitution. pic.twitter.com/ZYOPWIQznA
— Press Trust of India (@PTI_News) December 11, 2023