ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ದೇಶಾದ್ಯಂತ ವೈಫೈ ಇಂಟರ್ನೆಟ್ ನಿಷೇಧಿಸಿದೆ.
ಇಲ್ಲಿನ ಬಾಲ್ಖ್ ಪ್ರಾಂತ್ಯದಲ್ಲಿ ಅನೈತಿಕತೆಯನ್ನು ತಡೆಯುವ ನಿಟ್ಟಿನಲ್ಲಿ ವೈಫೈ ನಿಷೇಧಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಘೋಷಿಸಿದ್ದಾರೆ.
ವೈಫೈಗೆ ಪರ್ಯಾಯವಾಗಿ ಬೇರೆ ವ್ಯವಸ್ಥೆಯನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದರಿಂದಾಗಿ ಸರ್ಕಾರಿ ಕಚೇರಿಗಳು, ಖಾಸಗಿ ನೆಲೆಗಳಲ್ಲಿ ವೈಫೈ ರದ್ದಾಗಿದೆ. ವೈಫೈ ನಿಷೇಧದ ಹೊರತು ಮೊಬೈಲ್ ಇಂಟರ್ನೆಟ್ ಸೇವೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಬೇಕಿದೆ.