ಅಫ್ಘಾನಿಸ್ತಾನದಲ್ಲಿ ಕೊಲೆ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ ತಾಲಿಬಾನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಸರಕಾರ ಕೊಲೆ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ ಘಟನೆ ನಡೆದಿದೆ.

ಪಶ್ಚಿಮ ಫರಾಹ್ ಪ್ರಾಂತ್ಯದಲ್ಲಿ 2017 ರಲ್ಲಿ ವ್ಯಕ್ತಿಯನ್ನು ಇರಿದು ಕೊಂದ ಆರೋಪವನ್ನು ಈತ ಹೊಂದಿದ್ದ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

ಈ ಪ್ರಕರಣವನ್ನು ಮೂರು ನ್ಯಾಯಾಲಯಗಳು ತನಿಖೆ ಮಾಡಿವೆ. ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ನೆಲೆಸಿರುವ ತಂಡದ ಅತ್ಯುನ್ನತ ಆಧ್ಯಾತ್ಮಿಕ ನಾಯಕರಿಂದ ಶಿಕ್ಷೆಯನ್ನು ಅಧಿಕೃತಗೊಳಿಸಲಾಗಿದೆ ಎಂದು ಮುಜಾಹಿದ್ ಹೇಳಿದ್ದಾರೆ.

10ಕ್ಕೂ ಹೆಚ್ಚು ಹಿರಿಯ ತಾಲಿಬಾನ್ ಅಧಿಕಾರಿಗಳು ಮರಣದಂಡನೆ ಶಿಕ್ಷೆ ಸಂದರ್ಭದಲ್ಲಿ ಹಾಜರಾಗಿದ್ದರು. ಹಂಗಾಮಿ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿ, ಮತ್ತು ಹಾಲಿ ಉಪ ಪ್ರಧಾನಿ ಅಬ್ದುಲ್ ಘನಿ ಬರಾದಾರ್, ದೇಶದ ಮುಖ್ಯ ನ್ಯಾಯಮೂರ್ತಿ, ಹಂಗಾಮಿ ವಿದೇಶಾಂಗ ಮಂತ್ರಿ ಮತ್ತು ಹಾಲಿ ಶಿಕ್ಷಣ ಸಚಿವರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!