ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಹಾಗೂ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಸ್ಥಾಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ. ಜೊತೆಗೆ ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ ಎಂದರು.
ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ. ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಪಕ್ಷ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.