Tuesday, March 28, 2023

Latest Posts

ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮದ್ರಾಸ್‌ ಹೈಕೋರ್ಟ್ ಇತ್ತೀಚಿಗೆ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಇದೀಗ ಇದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಫೆಬ್ರವರಿ 10 ರಂದು ಮದ್ರಾಸ್‌ ಹೈಕೋರ್ಟ್ ನೀಡಿದ ಆದೇಶದಲ್ಲಿ, ಮಆರ್‌ಎಸ್‌ಎಸ್‌ಗೆ ಪಥಸಂಚಲನಕ್ಕೆ ಅನುಮತಿ ನೀಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿತ್ತು. ಆದ್ರೆ ಈ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಇದಕ್ಕೂ ಮೊದಲು ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ ಮತ್ತು ಗಾಂಧಿ ಜಯಂತಿಯ ಅಂಗವಾಗಿ ನಗರದಲ್ಲಿ ಆರ್‌ಎಸ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ಇದಕ್ಕೆ ತಮಿಳುನಾಡು ಸರ್ಕಾರವು ಆರ್‌ಎಸ್‌ಎಸ್‌ಗೆ ಅನುಮತಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಮದ್ರಾಸ್ ಹೈಕೋರ್ಟ್‌ಗೆ ಮನವಿ ಸಲ್ಲಿಸಿತು.

ಇದಾದ ನಂತರ ಕಳೆದ ವರ್ಷ ನವಂಬರ್‌ 4 ರಂದು ಮದ್ರಾಸ್ ಹೈಕೋರ್ಟ್‌ನ (Madras High Court) ಏಕಸದಸ್ಯ ಪೀಠ ಆರ್‌ಎಸ್‌ಎಸ್‌ಗೆ ಮೆರವಣಿಗೆ ನಡೆಸಲು ಅವಕಾಶ ನೀಡಿತು. ನವೆಂಬರ್ 4 ರ ಹೈಕೋರ್ಟ್ ಆದೇಶದಲ್ಲಿ ಆರ್‌ಎಸ್‌ಎಸ್ ತನ್ನ ಪಥಸಂಚಲನವನ್ನು (RSS route march) ಒಳಾಂಗಣದಲ್ಲಿ ಅಥವಾ ಯಾವುದಾದರೂ ಸಂಬಂಧಿತ ಮೈದಾನದಲ್ಲಿ ನಡೆಸುವಂತೆ ಷರತ್ತು ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಆದೇಶವನ್ನು ಆರ್‌ಎಸ್‌ಎಸ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಆರ್‌ಎಸ್‌ಎಸ್‌ನ ಈ ಅರ್ಜಿಯನ್ನು ಫೆಬ್ರವರಿ 10 ರಂದು ವಿಚಾರಣೆಗೆ ಕೈಗೆತ್ತಿಕೊಂಡ ಮದ್ರಾಸ್‌ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಆರ್ ಮಹದೇವನ್ (R Mahadevan) ಮತ್ತು ಮೊಹಮ್ಮದ್ ಶಫೀಕ್ (Mohammed Shaffiq) ಅವರ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಿತು. ಅಲ್ಲದೇ ಕಳೆದ ವರ್ಷ ಸೆಪ್ಟೆಂಬರ್ 22ರಂದು ನೀಡಿದ್ದ ಹಿಂದಿನ ಆದೇಶವನ್ನು ಮರುಸ್ಥಾಪಿಸಿತ್ತು. ಅಲ್ಲದೇ ಈ ಪೀಠ ಆರ್‌ಎಸ್‌ಎಸ್ ಪ್ರಾತಿನಿಧ್ಯವನ್ನು ಪರಿಗಣಿಸುವ ಜೊತೆ ಅವರಿಗೆ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!