ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾದಗಿರಿ ಜಿಲ್ಲೆ ಸೈದಾಪುರದ ಮಹಾವೀರ್ ಜೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊಬ್ಬ ಗಣಿತದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಯ ಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿರುವ ಘಟನೆ ನಡೆದಿದೆ.
ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ ಎಂಬ ಬಾಲಕ ಗಣಿತದಲ್ಲಿ ಕಡಿಮೆ ಅಂಕ ಪಡೆದ ಎಂಬ ಕಾರಣಕ್ಕೆ ಶಿಕ್ಷಕ ಡೆಲ್ವೀಲ್ ಮನ ಬಂದಂತೆ ಥಳಿಸಿದ್ದಾನೆ.
ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ ಬಾರಿಸಿದ್ದಾನೆ. ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಗಸ್ಟ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಥಳಿತಕ್ಕೆ ಒಳಗಾದ ವಿದ್ಯಾರ್ಥಿ ಯುವರಾಜ್ ತನ್ನ ಪಾಲಕರಿಗೆ ವಿಷಯ ತಿಳಿಸಿದ್ದು ಶಿಕ್ಷಕನ ವಿರುದ್ಧ ಸೈದಾಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.