ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಯಲ್ಲಿ ಮಕ್ಕಳಿಗೆ ಅನ್ನದ ಜೊತೆ ಸಾಂಬಾರ್ ನೀಡಲಾಗುತ್ತದೆ. ಆದರೆ ಇಲ್ಲಿ ಅನ್ನಕ್ಕೆ ಕೆಂಪುಮೆಣಸಿನ ಪುಡಿ ಹಾಕಿ ಊಟ ಮಾಡಿ ಎಂದು ಮಕ್ಕಳಿಗೆ ಹೇಳಲಾಗಿದೆ.
ಶಾಲೆಯಲ್ಲಿ ಮಧ್ಯಾಹ್ನ ಮಕ್ಕಳಿಗೆ ನೀಡುವ ಬಿಸಿಯೂಟದಲ್ಲಿ ಮೆಣಸಿನ ಪುಡಿ ಬೆರೆಸಿ ನೀಡಿರುವ ಘಟನೆ ತೆಲಂಗಾಣದ ಕೊತ್ತಪಲ್ಲಿ ಗ್ರಾಮದಲ್ಲಿ ನಡೆದಿದೆ.
ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಬಿಆರ್‌ಎಸ್ ನಾಯಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ತೆಲಂಗಾಣ ಮಾಜಿ ಸಚಿವ ಕೆ.ಟಿ.ರಾಮರಾವ್ ಕಾಂಗ್ರೆಸ್ ಸರ್ಕಾರವನ್ನು ಖಂಡಿಸಿದ್ದು, ಮೆಣಸಿನ ಪುಡಿಯೊಂದಿಗೆ ಅನ್ನಯನ್ನು ತಿನ್ನಲು ಮಕ್ಕಳಿಗೆ ಒತ್ತಾಯಿಸಲಾಗುತ್ತಿದೆ. ಕೆಸಿಆರ್ ಸರ್ಕಾರ ಶಾಲಾ ಮಕ್ಕಳಿಗೆ ಅದ್ಭುತವಾದ ಉಪಹಾರ ಯೋಜನೆಯನ್ನು ಜಾರಿಗೆ ತಂದಿದೆ, ಅದನ್ನು ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣವಿಲ್ಲದೆ ರದ್ದುಗೊಳಿಸಿದೆ ಎಂದು ಹೇಳಿದ್ದಾರೆ.