ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ದೇವಸ್ಥಾನದ ತೇರು: ಬೆಂಕಿ ಹಚ್ಚಿದ ಕಿಡಿಗೇಡಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶತಮಾನಗಳಷ್ಟು ಹಳೆಯದಾದ ದೇವಸ್ಥಾನ ತೇರು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ಘಟನೆ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿರುವ ಪುರ ಗ್ರಾಮದ ಶ್ರೀಕಲ್ಲೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ಈ ಘಟನೆ ಸಂಭವಿಸಿದ, ಬೆಂಕಿಯಲ್ಲಿ ದೇವಸ್ಥಾನದ ತೇರು ಸಂಪೂರ್ಣ ಸುಟ್ಟು ಕರಕಲಾಗಿದೆ.

ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರಥ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬೆಂಕಿ ಹಚ್ಚಿದ ಕಿಡಿಗೇಡಿ ಅರೆಸ್ಟ್

ಪುರಾತನ ಕಾಲದ ರಥಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಘೋರಕ್ ಪುರ ಮೂಲದ ಉದಾರಿ (32) ಬಂಧಿತ ಆರೋಪಿ. ಉದರಿ ರಥದ ಬಳಿ ತೆಂಗಿನ ಗರಿಗಳನ್ನು ಇಟ್ಟು ಬೆಂಕಿ‌ ಹಚ್ಚಿದ್ದಾನೆ ಎನ್ನಲಾಗಿದೆ. ಇದನ್ನು ಕಂಡವರು ಪುರ ಗ್ರಾಮದ ರೇಣುಕಪ್ಪ, ಶಾಂತರಾಜು ಗ್ರಾಮಸ್ಥರಿಗೆ ಈ ಬಗ್ಗೆ ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!