ಭೀಕರ ಅಪಘಾತ: ದಂಪತಿ ಸೇರಿ ಮೂವರು ಸಜೀವ ದಹನ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಹರಿಯಾಣದ ಪಾಣಿಪತ್​ನಲ್ಲಿ ಟ್ರಕ್​ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಟ್ರಕ್​-ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಪಾಣಿಪತ್​​ನಿಂದ ಗೊಹಾನಾ ಕಡೆಗೆ ತೆರಳುತ್ತಿದ್ದ ಕಾರಿಗೆ ವೇಗವಾಗಿ ಬಂದ ಟ್ರಕ್​ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, 8 ವರ್ಷದ ಮಗು ಸೇರಿ ದಂಪತಿ ಸಜೀವ ದಹನವಾಗಿದ್ದಾರೆ. ಕಾರು ಚಾಲಕ​ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಕರ್ನಾಲ್​ನ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!