June 30, 2026
Tuesday, June 30, 2026
spot_img

ಕಣ್ಣೀರಿನ ನಾಟಕದ ಹಿಂದೆ ಭಯಾನಕ ಸತ್ಯ: 7 ತಿಂಗಳ ಕಂದಮ್ಮನ ಸಾವಿನ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಮೀರತ್‌ನಲ್ಲಿ ಏಳು ತಿಂಗಳ ಗಂಡು ಮಗುವಿನ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮಗುವಿನ ತಾಯಿಯನ್ನೇ ಪೊಲೀಸರು ಬಂಧಿಸಿದ್ದಾರೆ. ಆರಂಭದಲ್ಲಿ ಅನಾರೋಗ್ಯದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಕ್ಕೆ ತಿಳಿಸಲಾಗಿದ್ದರೂ, ತನಿಖೆಯಲ್ಲಿ ಬೇರೆ ವಿಚಾರಗಳು ಬೆಳಕಿಗೆ ಬಂದಿವೆ.

ಅನಾರೋಗ್ಯದ ಕಥೆಯ ಹಿಂದೆ ಅಡಗಿದ್ದ ಅನುಮಾನ

ಮೇ 30ರಂದು ಮಗು ಅಸ್ವಸ್ಥಗೊಂಡು ಮೃತಪಟ್ಟಿದೆ ಎಂದು ಕುಟುಂಬ ಸದಸ್ಯರಿಗೆ ತಿಳಿಸಲಾಗಿತ್ತು. ಬಳಿಕ ಮಗುವಿನ ಅಂತ್ಯಕ್ರಿಯೆಯನ್ನೂ ಗ್ರಾಮದಲ್ಲೇ ನೆರವೇರಿಸಲಾಗಿತ್ತು. ಆದರೆ ಮಗುವಿನ ತಂದೆಗೆ ಘಟನೆಯ ಬಗ್ಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಯಿತು.

ಇದನ್ನೂ ಓದಿ:

ದಾಂಪತ್ಯ ಕಲಹದಿಂದ ಪ್ರಕರಣಕ್ಕೆ ಹೊಸ ತಿರುವು

ಪತಿ-ಪತ್ನಿಯ ನಡುವೆ ಹಲವು ದಿನಗಳಿಂದ ಕುಟುಂಬ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆಗಾಗ ವಾಗ್ವಾದಗಳು ನಡೆಯುತ್ತಿದ್ದವು. ಕೆಲವು ವೈಯಕ್ತಿಕ ವಿಚಾರಗಳೂ ದಂಪತಿಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದ್ದವು ಎಂದು ಮೂಲಗಳು ತಿಳಿಸಿವೆ.

ತನಿಖೆ ವೇಳೆ ಮಹಿಳೆಯ ಬಂಧನ

ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದರು. ವಿಚಾರಣೆ ವೇಳೆ ಮಹಿಳೆ ಮಗುವಿನ ಸಾವಿಗೆ ಸಂಬಂಧಿಸಿದಂತೆ ಮೀನಾಕ್ಷಿ ಮಗುವನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಆಕೆಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣದ ಇತರೆ ಆಯಾಮಗಳ ಕುರಿತು ಕೂಡ ಪೊಲೀಸರು ತನಿಖೆ ಮುಂದುವರಿಸಿದ್ದು, ಸಂಪೂರ್ಣ ಸತ್ಯ ಹೊರಬರುವ ನಿರೀಕ್ಷೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !