ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬೆಳಕಿನ ಸಂಯೋಜನೆಯಲ್ಲಿ ನಿಷ್ಣಾತರಾಗಿರುವ ಪ್ರತಿಭಾವಂತ ರಂಗಕರ್ಮಿ ವಿ. ರಾಮಮೂರ್ತಿ (86) ಅವರು ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ವಯೋಸ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ನಿರ್ದೇಶನ, ಅಭಿನಯ, ಮೂಕಾಭಿನಯ, ರಂಗವಿನ್ಯಾಸ, ಬೆಳಕು ವಿನ್ಯಾಸ, ರಂಗಸಂಗೀತ, ಪ್ರಸಾಧನ ಹಾಗೂ ವಸ್ತ್ರವಿನ್ಯಾಸ ಹೀಗೆ ರಂಗಭೂಮಿಯ ಎಲ್ಲಾ ವಿಭಾಗಗಳಲ್ಲಿ ಅಪಾರ ಪರಿಣತಿ ಸಾಧಿಸಿರುವ ವಿ.ರಾಮಮೂರ್ತಿ ಅವರು ವಿಶೇಷವಾಗಿ, ಬೆಳಕಿನ ಸಂಯೋಜನೆಯಲ್ಲಿ ನಿಷ್ಣಾತರಾಗಿರುವ ಪ್ರತಿಭಾವಂತರಾಗಿದ್ದರು.
ನ್ಯೂಯಾರ್ಕ್ ನಗರ, ಅಮೆರಿಕಾ ಮತ್ತು ಯುರೋಪ್ ನ ಪ್ರಮುಖ ಕೇಂದ್ರಗಳಲ್ಲಿ ರಂಗಭೂಮಿಯ ಎಲ್ಲಾ ವಿಭಾಗಗಳಲ್ಲಿ ಕೆಲಸಮಾಡಿ ಅಪಾರವಾದ ಅನುಭವ ಪಡೆದಿದ್ದರು. 8 ವಿಶ್ವವಿದ್ಯಾಲಯಗಳ ರಂಗಭೂಮಿ ವಿಭಾಗಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.