DENGUE | ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂಗೆ ಮೂರನೇ ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿದೆ, ಜತೆಗೆ ಡೆಂಗ್ಯೂ ಜ್ವರಕ್ಕೆ ಮತ್ತೊಬ್ಬ ವ್ಯಕ್ತಿ ಪ್ರಾಣಬಿಟ್ಟಿದ್ದಾರೆ.

 ಕಗ್ಗದಾಸಪುರದ ಯುವಕ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಬಿಬಿಎಂಪಿ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಇನ್ನು, ಶುಕ್ರವಾರ ಮೃತಪಟ್ಟ 80 ವರ್ಷದ ವೃದ್ದೆಯ ಸಾವಿಗೆ ಡೆಂಗ್ಯೂ ಅಲ್ಲ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ಈಗ ಹೊಸದಾಗಿ 213 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಜೂನ್‌ನಲ್ಲಿ 1,742 ಜನರಲ್ಲಿ ಸೋಂಕು ದೃಢಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!