ಟಿಲ್ಲರ್ ಮಗುಚಿ ಬಿದ್ದು ಚಾಲಕ ಸಾವು

ಹೊಸದಿಗಂತ ವರದಿ,ಮಡಿಕೇರಿ:

ಟಿಲ್ಲರ್ ಮಗುಚಿ‌ ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಪೊನ್ನಂಪೇಟೆ ತಾಲೂಕಿನ ಬೆಸಗೂರು ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಟಿಲ್ಲರ್ ಚಾಲಕ ಸಣ್ಣಕ್ಕಿ ಎಂಬವರೇ ಮೃತ ದುರ್ದೈವಿ.
ಭತ್ತದ ಚೀಲಗಳನ್ನು ಸಾಗಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿಕೊಂಡಿದ್ದು, ಈ ಸಂದರ್ಭ ಸಣ್ಣಕ್ಕಿ ಟಿಲ್ಲರ್ ಅಡಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೇಳಲಾಗಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!