ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಕೆ ಶಿವಕುಮಾರ್ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳಬೇಗುದಿ ಆರಂಭದಿಂದಲೂ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವ ಪ್ರಶ್ನೆ ನಿರ್ಮಾಣವಾಗಿದ್ದು, ಕಾಲ ಸನ್ನಿಹಿತವಾಗಿದೆ.
ಇದು ನಿರೀಕ್ಷಿತ ಬೆಳವಣಿಗೆ, ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿ ಅವರ ಸಹನೆ, ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ದಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ವಾಗ್ದಾಳಿ ನಡೆಸಿದರು.