ಡಿಕೆಶಿ ಕನಸು ನನಸಾಗೋ ಕಾಲ ಬಂದಾಯ್ತು: ಗ್ರೇಟರ್ ಬೆಂಗಳೂರುಗೆ ಸಿಕ್ತು ರಾಜ್ಯಪಾಲರ ಅಂಕಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ, ಬಿಬಿಎಂಪಿ 7 ನಗರ ಪಾಲಿಕೆಗಳಾಗಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅನುಮೋದನೆ ಸಿಕ್ಕಿದೆ.

ಬಜೆಟ್ ಅಧಿವೇಶನದ ಉಭಯ ಸದನಗಳಲ್ಲಿ ಸುದೀರ್ಘ ಚರ್ಚೆ ಬಳಿಕ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಅಂಗೀಕಾರ ಆಗಿತ್ತು. ಮಾ.17ರಂದು ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಲಾಗಿತ್ತು. ಆದರೆ ಹೆಚ್ಚಿನ ವಿವರಣೆ ಕೋರಿ ವಿಧೇಯಕವನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳಿಹಿಸಿದ್ದರು.

ಬಳಿಕ ಸರ್ಕಾರ ಸ್ಪಷ್ಟನೆಯೊಂದಿಗೆ ಮತ್ತೆ ವಿಧೇಯಕವನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. ಇದೀಗ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!