August 21, 2026
Friday, August 21, 2026
spot_img

‘ತುಮಕೂರಿಗೆ ಮೆಟ್ರೋ’ ಕನಸು ನನಸಾಗೋ ಸಮಯ ಬಂತು: ಸರ್ಕಾರದ ಕೈ ಸೇರಿತು DPR ವರದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಹೊರವಲಯದಿಂದ ತುಮಕೂರಿನವರೆಗೆ ಮೆಟ್ರೋ ಸಂಪರ್ಕ ಕಲ್ಪಿಸುವ ಬಹುಕಾಲದ ಕನಸಿಗೆ ಇದೀಗ ವೇಗ ಸಿಕ್ಕಿದೆ.

ಮಾದಾವರದಿಂದ ತುಮಕೂರುವರೆಗೆ ಮೆಟ್ರೋ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದ ಸಮಗ್ರ ಯೋಜನಾ ವರದಿ (ಡಿಪಿಆರ್) ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಯೋಜನೆ ಮುಂದಿನ ಹಂತಕ್ಕೆ ಸಾಗುವ ಸಾಧ್ಯತೆ ಹೆಚ್ಚಾಗಿದೆ.

ಪರಮೇಶ್ವರ್‌ಗೆ ವರದಿ ಹಸ್ತಾಂತರ

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಡಿಪಿಆರ್ ವರದಿಯನ್ನು ಸ್ವೀಕರಿಸಿದರು. ಈ ಯೋಜನೆ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ. ಬೆಂಗಳೂರು ಮೆಟ್ರೋ ರೈಲು ನಿಗಮವು ವಿಶೇಷ ಸಂಸ್ಥೆಯ ಸಹಾಯದಿಂದ ವರದಿ ಸಿದ್ಧಪಡಿಸಿದೆ.

20 ಸಾವಿರ ಕೋಟಿ ವೆಚ್ಚದ ಯೋಜನೆ

ಯೋಜನೆಗೆ ಸುಮಾರು 20 ಸಾವಿರ ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಪಿಪಿಪಿ ಮಾದರಿಯಲ್ಲಿ ಈ ಮೆಟ್ರೋ ಕಾಮಗಾರಿ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಈಗಾಗಲೇ ಸಾಧ್ಯತಾ ಅಧ್ಯಯನಕ್ಕಾಗಿ ಖಾಸಗಿ ಸಂಸ್ಥೆಯಿಂದ ವರದಿ ಪಡೆದಿದ್ದ ಸರ್ಕಾರ, ಅದರ ಆಧಾರದ ಮೇಲೆ ಡಿಪಿಆರ್ ಸಿದ್ಧಪಡಿಸಿದೆ.

ಇದನ್ನೂ ಓದಿ:

ಸಂಪುಟ ಸಭೆಯ ಬಳಿಕ ಮುಂದಿನ ಕ್ರಮ

ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ಕುರಿತು ಬಹಳ ದಿನಗಳಿಂದ ಬೇಡಿಕೆ ಇತ್ತು. ಇದೀಗ ಡಿಪಿಆರ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಯೋಜನೆಗೆ ಅಧಿಕೃತ ಅನುಮೋದನೆ ಸಿಗುವ ನಿರೀಕ್ಷೆ ಮೂಡಿದೆ. ಸಚಿವ ಸಂಪುಟ ಸಭೆಯ ಬಳಿಕ ಟೆಂಡರ್ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !