ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದ ಪುರಾಣ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥದ ಮೇಲ್ಭಾಗ ಕಳಚಿ ಬಿದ್ದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಬಾಗ ಏಕಾಏಕಿ ಕಳಚಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ.
ಈ ವೇಳೆ, ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಹಾಗೂ ಅರ್ಚಕರು ರಥದಲ್ಲೇ ಇದ್ದರು. ಆದರೆ, ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ ದೇವಿಯನ್ನು ಚಂದ್ರಮಂಡಲ ರಥದಲ್ಲಿ ಕೂರಿಸಿ ಉತ್ಸವ ಮುಂದುವರಿಸಿ, ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಉತ್ಸವ ಸಂದರ್ಭದಲ್ಲೇ ಬ್ರಹ್ಮರಥ ಮುರಿದು ಬಿದ್ದಿರುವುದು ಭಕ್ತರ ಮತ್ತು ಕ್ಷೇತ್ರದವರ ಆತಂಕ ಮತ್ತು ಕಳವಳಕ್ಕೆ ಕಾರಣವಾಗಿದೆ.