ಹೊಸದಿಗಂತ ವರದಿ, ಕಲಘಟಗಿ:
ಜಮೀನ ಉಳುಮೆ ಮಾಡುತ್ತಿರುವಾಗ ಟ್ರ್ಯಾಕ್ಟರ್ ಮುಗುಚಿ ಬಿದ್ದ ಪರಿಣಾಮ ಗ್ರಾಪಂ ಸದಸ್ಯ ಸ್ಥಳದಲ್ಲೇ ಮೃತಪಟ್ಟ ಘಟನೆ ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಸೂರಶೆಟ್ಟಿ ಗ್ರಾಮದ ಸಂತೋಷಕುಮಾರ ಹೊಸಮನಿ (೩೧) ಮೃತ ವ್ಯಕ್ತಿ. ತಮ್ಮ ಜಮೀನಿನಲ್ಲಿ ಮೆಕ್ಕೆಜೋಳ ಕಟಾವಿನ ನಂತರ ಟ್ರ್ಯಾಕ್ಟರ್ ಮುಖಾಂತರ ಹಿಂಗಾರು ಹಂಗಾಮಿಗೆ ಜಮೀನು ಹದಗೊಳಿಸಲು ಮುಂದಾಗಿದ್ದರು. ಏಕಾಏಕಿ ಟ್ರ್ಯಾಕ್ಟರ್ ಮುಗುಚಿ ಬಿದ್ದಿದೆ. ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದಿನ ಅವಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು