ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲುಗಳಲ್ಲಿ ಇನ್ನಷ್ಟು ಸುರಕ್ಷತೆ ಹೆಚ್ಚಿಸಲು ಭಾರತೀಯ ರೈಲ್ವೆ ಮುಂದಾಗಿದೆ. ಇದಕ್ಕಾಗಿ ಬರೋಬ್ಬರಿ 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲು ಬೋಗಿ ಹಾಗೂ ಎಂಜಿನ್‌ಗಳಿಗೆ ಕೃತಕ ಬುದ್ಧಿಮತ್ತೆ (ಎಐ) ಚಾಲಿತ 75 ಲಕ್ಷ ಸಿಸಿ ಕ್ಯಾಮೆರಾ ಅಳವಡಿಸಲು ಇಲಾಖೆ ಸಿದ್ಧತೆ ನಡೆಸಿದೆ.
ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಟೆಂಡರ್ ಕರೆಯುವ ಸಾಧ್ಯತೆಯಿದೆ. ಪ್ರಸ್ತುತ ಯೋಜನೆಯ ಪ್ರಕಾರ, ಟೆಂಡರ್ ಪಡೆದವರಿಗೆ ಆದೇಶವನ್ನು ನೀಡಿದ ನಂತರ ಒಂದು ವರ್ಷದ ಅವಧಿಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಪೂರ್ಣಗೊಳಿಸಬೇಕಿದೆ. ಮೂಲಗಳ ಮಾಹಿತಿ ಪ್ರಕಾರ ರೈಲುಗಳ ಎಂಜಿನ್, ಗಾರ್ಡ್ ಕೋಚ್‌ನ ಮುಂಭಾಗ, ಹಿಂಭಾಗ ಮತ್ತು ಬದಿಗಳಲ್ಲಿ ಹಾಗೂ ಬೋಗಿಗಳಲ್ಲಿ ಮತ್ತು ಕ್ಯಾಟಲ್ ಗಾರ್ಡ್‌ಗೂ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ.
ರೈಲು ದುರಂತ ನಡೆಸಲು ಹಲವು ಶಂಕಿತ ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ರೈಲ್ವೆ ಈ ಕ್ರಮಕ್ಕೆ ಮುಂದಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ