ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಆತ್ಮಹತ್ಯೆಗೈದ ಹಿಂದಿ ಕಿರುತೆರೆಯ ನಟಿ ತುನಿಷಾ ಶರ್ಮಾ ಸಾವು ಹಲವು ಅನುಮಾನಗಳು ಮೂಡಿದ್ದು, ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಬೇರೆ ಏನೋ ಇದೆ ಎಂದು ತುನಿಷಾ ತಾಯಿ ಹೇಳಿದ್ದರು. ಇದೀಗ ಈ ಎಲ್ಲ ಅನುಮಾನಗಳಿಗೂ ಉತ್ತರ ಸಿಕ್ಕಿದೆ.
ನಟಿಯ ಮರಣೋತ್ತರ ವರದಿ ಸಿಕ್ಕಿದ್ದು, ತುನಿಷಾ ಅವರದ್ದು ಆತ್ಮಹತ್ಯೆ ಎಂದು ಬಹಿರಂಗವಾಗಿದೆ. ಅಲ್ಲದೇ, ಅವರು ಗರ್ಭಿಣಿ ಎಂದು ಹೇಳಲಾಗಿತ್ತು. ಅದು ಕೂಡ ಸುಳ್ಳು ಎನ್ನುವ ವರದಿ ಬಂದಿದೆ. ಮೈಮೇಲೆ ಯಾವುದೇ ತರಹದ ಗುರುತುಗಳು ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ ತುನಿಷಾ ಸಾವು ಆತ್ಮಹತ್ಯೆಯಿಂದ ಆಗಿದ್ದು ಎಂದು ದೃಢಪಡಿಸಿದ್ದಾರೆ.
ಈ ಸಾವಿಗೆ ಆಕೆಯ ಪ್ರಿಯಕರ ಶಿಜಾನ್ ಕಾರಣ ಎಂದು ಆರೋಪಿಸಲಾಗಿದೆ. ಸಿಕ್ಕಿರುವ ಡೆತ್ ನೋಟ್ ನಲ್ಲಿ ಶಿಜಾನ್ ಹೆಸರನ್ನು ಆಕೆ ಉಲ್ಲೇಖಿಸಿದ್ದರು ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಜಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.