ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನ ಸಾಮಾನ್ಯರು ಒಂದರ ಹಿಂದೊಂದರಂತೆ ಬೆಲೆ ಏರಿಕೆಯನ್ನು ಎದುರಿಸುತ್ತಿದ್ದು, ಟೊಮೆಟೊ ಬೆಲೆ ಈರುಳ್ಳಿ, ಬೆಳ್ಳುಳ್ಳಿಯಂತೆ ದುಬಾರಿಯಾಗಿದೆ.
ಒಂದು ವಾರದ ಹಿಂದೆ ಕೆಜಿಗೆ 40 ರೂ. ಇದ್ದ ದರ ಇದೀಗ ದ್ವಿಗುಣಗೊಳಿಸಲಾಗಿದೆ. ಕೆಜಿಗೆ 80 ರೂ. ದರದಲ್ಲಿ ಟೊಮೆಟೊ ಮಾರಾಟವಾಗುತ್ತಿದೆ. ಅಕಾಲಿಕ ಮಳೆಯಿಂದ ಟೊಮೆಟೊ ಇಳುವರಿ ಕುಸಿತಗೊಂಡಿದೆ.
ಇದರೊಂದಿಗೆ ನವರಾತ್ರಿ ಉತ್ಸವ ಆರಂಭವಾಗಿದೆ. ಬೇಡಿಕೆ ಹೆಚ್ಚಿದೆ. ಪೂರೈಕೆ ಕೊರತೆಯಿಂದ ಟೊಮೆಟೊ ಬೆಲೆ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.