ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಲು ಯತ್ನಿಸಿದ್ದು, ಸ್ಥಳೀಯರು ಕಾಮುಕರನ್ನು ಹಿಡಿದು, ಹೊಡೆದು ಕೊಂದಿದ್ದಾರೆ.
ಮೇಘಾಲಯದ ಖಾಸಿ ಹಿಲ್ಸ್ ಜಿಲ್ಲೆಯ ಮೈರಾಂಗ್ನ ನೊಂಗ್ತ್ಲಿವ್ ಗ್ರಾಮದಲ್ಲಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಬಾಲಕಿ ಮನೆಯಲ್ಲಿದ್ದಾಗ ಇಬ್ಬರೂ ಚಾಕುವಿನಿಂದ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.
ಬಾಲಕಿ ಕಿರುಚಾಟವನ್ನು ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದು ಇಬ್ಬರನ್ನು ಹಿಡಿದಿದ್ದಾರೆ. ಬಳಿಕ ಅಕ್ಕಪಕ್ಕದ ಮನೆಯವರು ಊರಿನ ಎಲ್ಲರಿಗೂ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿದ್ದಾರೆ. ಬಳಿಕ ನೂರಕ್ಕೂ ಅಧಿಕ ಮಂದಿ ಸೇರಿ ಇಬ್ಬರನ್ನು ಥಳಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ತಿರೋತ್ ಸಿಂಗ್ ಎಂಬಾತ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನೊಬ್ಬ ಶಿಲ್ಲಾಂಗ್ ಸಿವಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.