ಆರೆಸ್ಸೆಸ್ ನಿಷೇಧ, ವಕ್ಫ್ ಮಸೂದೆ ವಿರೋಧ ಸಹಿತ 17 ಬೇಡಿಕೆ ಮುಂದಿಟ್ಟು ಎಂವಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ ಉಲಮಾ ಮಂಡಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನಾ ಪಕ್ಷಗಳ ಮಹಾ ವಿಕಾಶ್ ಆಘಾಡಿ (ಎಂವಿಎ) ಕೂಟಕ್ಕೆ ಬೆಂಬಲ ನೀಡಲು ಅಖಿಲ ಭಾರತ ಉಲಮಾ ಬೋರ್ಡ್ ಮುಂದಾಗಿದೆ.

ಆದರೆ, ಈ ಹೆಜ್ಜೆ ಇಡಲು ಹಲವು ಷರತ್ತುಗಳನ್ನೂ ಮುಂದಿಟ್ಟಿದೆ. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್​ಸಿಪಿ ಮುಖ್ಯಸ್ತ ಶರದ್ ಪವಾರ್ ಮತ್ತು ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವರಿಗೆ ಉಲಮಾ ಬೋರ್ಡ್ ಪತ್ರ ಬರೆದಿದೆ.

ನಮ್ಮದು ಷರತ್ತುಬದ್ಧ ಬೆಂಬಲ ಎಂದು ಸ್ಪಷ್ಟಪಡಿಸಿದ್ದು, ಆರೆಸ್ಸೆಸ್ ನಿಷೇಧಿಸಬೇಕು, ವಕ್ಫ್ ಮಸೂದೆಯನ್ನು ವಿರೋಧಿಸಬೇಕು. ಮಹಾರಾಷ್ಟ್ರದ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು. ಅತಿಕ್ರಮಗೊಂಡ ವಕ್ಫ್ ಆಸ್ತಿಗಳನ್ನು ಮರಳು ಕ್ರಮ ತೆಗೆದುಕೊಳ್ಳಬೇಕು ಎಂಬಿತ್ಯಾದಿ 17 ಬೇಡಿಕೆಗಳನ್ನು ಉಲೇಮಾ ಮಂಡಳಿ ಮುಂದಿಟ್ಟಿದೆ.

ಎಂವಿಎ ಮೈತ್ರಿಕೂಟಕ್ಕೆ ಉಲಮಾ ಬೋರ್ಡ್ ಇಟ್ಟಿರುವ ಪ್ರಮುಖ ಬೇಡಿಕೆ:

  • ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಬೇಕು
  • ಮಹಾರಾಷ್ಟ್ರದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ. 10 ಮೀಸಲಾತಿ.
  • ಮಹಾರಾಷ್ಟ್ರದ 48 ಜಿಲ್ಲೆಗಳಲ್ಲಿ ಅತಿಕ್ರಮಗೊಂಡಿರುವ ವಕ್ಫ್ ಆಸ್ತಿಗಳನ್ನು ಮರಳಿ ಕೊಡಲಾಗುವಂತೆ ಕಾನೂನು ರೂಪಿಸಬೇಕು.
  • ಮಹಾರಾಷ್ಟ್ರ ವಕ್ಫ್ ಬೋರ್ಡ್​ಗೆ 1,000 ಕೋಟಿ ರೂ ಹಣ ಒದಗಿಸಬೇಕು.
  • ಮಹಾರಾಷ್ಟ್ರ ರಾಜ್ಯದಲ್ಲಿ ಪೊಲೀಸ್ ನೇಮಕಾತಿಯಲ್ಲಿ ಮುಸ್ಲಿಮರಿಗೆ ಆದ್ಯತೆ.
  • ಎಂವಿಎ ಸರ್ಕಾರ ರಚನೆಯಾದರೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು.
  • ಬಿಜೆಪಿ ನಾಯಕ ನಿತೇಶ್ ರಾಣೆ ಮತ್ತು ರಾಮಗಿರಿ ಮಹಾರಾಜ್ ಅವರನ್ನು ಕೂಡಲೇ ಬಂಧಿಸಬೇಕು.
  • ಪ್ರಚೋದನಕಾರಿ ಹೇಳಿಕೆ ನೀಡಿ ಬಂಧಿತರಾಗಿರುವ ಮೌಲಾನ ಸಲ್ಮಾನ್ ಅಝೇರಿ ಅವರನ್ನು ಬಿಡುಗಡೆ ಮಾಡಬೇಕು.
  • 2012ರಿಂದ 2024ರವರೆಗೆ ಗಲಭೆ ಪ್ರಕರಣಗಳಲ್ಲಿ ಬಂಧಿತರಾಗಿರುವ ಅಮಾಯಕ ಮುಸ್ಲಿಮರನ್ನು ಬಿಡುಗಡೆ ಮಾಡಬೇಕು.
  • ಮಹಾರಾಷ್ಟ್ರ ಮಸೀದಿಗಳ ಇಮಾಮರು ಮತ್ತು ಮೌಲಾನಗಳಿಗೆ ಮಾಸಿಕ 15,000 ರೂ ಸಂಭಾವನೆ ನೀಡಬೇಕು.
  • ಅಧಿಕಾರಕ್ಕೆ ಬಂದ ಬಳಿಕ ಅಖಿಲ ಭಾರತ ಉಲಮಾ ಮಂಡಳಿಯ ಮುಫ್ತಿ ಮೌಲಾನ, ಅಲೀಮ್ ಹಫೀಜ್ ಮಸೀದಿಯ ಇಮಾಮರನ್ನು ಸರ್ಕಾರದ ಸಮಿತಿಯಲ್ಲಿ ಸೇರಿಸಿಕೊಳ್ಳಬೇಕು.
  • ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮ್ ಸಮುದಾಯದ 50 ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು.
  • ಮಹಾರಾಷ್ಟ್ರ ರಾಜ್ಯ ವಕ್ಫ್ ಬೋರ್ಡ್​ನಲ್ಲಿ 500 ಉದ್ಯೋಗಿಗಳ ನೇಮಕಾತಿ ಆಗಬೇಕು.
  • ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡುವ ಜನರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.
  • ಮಹಾರಾಷ್ಟ್ರದ 48 ಜಿಲ್ಲೆಗಳಲ್ಲಿ ಎಂವಿಎ ಪರವಾಗಿ ಪ್ರಚಾರ ಮಾಡಲು ಉಲಮಾ ಮಂಡಳಿಗೆ ಅಗತ್ಯವಾಗಿರುವ ಸಾಮಗ್ರಿಗಳನ್ನು ಒದಗಿಸಬೇಕು.

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ಆಗುತ್ತಿದೆ. ನವೆಂಬರ್ 23ರಂದು ಮತ ಎಣಿಕೆಯಾಗಿ ಫಲಿತಾಂಶ ಹೊರಬರಲಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!